Elige una pista para reproducir

ಬಾಡಿಹೋದ ಬಳ್ಳಿಯಿಂದ ಹೂವು ಅರಳಬಲ್ಲದೆ
ಬಾಡಿಹೋದ ಬಳ್ಳಿಯಿಂದ ಹೂವು ಅರಳಬಲ್ಲದೆ
ತಂತಿ ಹರಿದ ವೀಣೆಯಿಂದ ನಾದ ಹರಿಯಬಲ್ಲದೆ
ಮನಸು ಕಂಡ ಆಸೆಯೆಲ್ಲ ಕನಸಿನಂತೆ ಕರಗಿತಲ್ಲ
ಉಲ್ಲಾಸ ಇನ್ನೆಲ್ಲಿದೆ
ಬಾಡಿಹೋದ ಬಳ್ಳಿಯಿಂದ ಹೂವು ಅರಳಬಲ್ಲದೆ
ಹಣತೆಯಲ್ಲಿ ದೀಪ ಉರಿಯೇ ಬೆಳಕಿನಲ್ಲಿ ಬಾಳುವೆ
ಹಣತೆಯಲ್ಲಿ ದೀಪ ಉರಿಯೆ ಬೆಳಕಿನಲ್ಲಿ ಬಾಳುವೆ
ಧರೆಯೆ ಹತ್ತಿ ಉರಿಯುವಾಗ ಬದುಕಲೆಲ್ಲಿ ಓಡುವೆ
ಧರೆಯೆ ಹತ್ತಿ ಉರಿಯುವಾಗ ಬದುಕಲೆಲ್ಲಿ ಓಡುವೆ
ಬಾಡಿಹೋದ ಬಳ್ಳಿಯಿಂದ ಹೂವು ಅರಳಬಲ್ಲದೆ
ನೀರಿನಲ್ಲಿ ದೋಣಿ ಮುಳುಗೆ ಈಜಿ ದಡವ ಸೇರುವೆ
ನೀರಿನಲ್ಲಿ ದೋಣಿ ಮುಳುಗೆ ಈಜಿ ದಡವ ಸೇರುವೆ
ಸುಳಿಗೆ ದೊಣಿ ಸಿಲುಕಿದಾಗ ಬದುಕಿ ಬರಲು ಸಾಧ್ಯವೆ
ಸುಳಿಗೆ ದೊಣಿ ಸಿಲುಕಿದಾಗ ಬದುಕಿ ಬರಲು ಸಾಧ್ಯವೆ